ಗಡಿನಾಡು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಹಿಂಸಾರೂಪದ ಪ್ರತಿಭಟನೆಗೆ ಸಾಕ್ಷಿಯಾಗಿದೆ.
2 ಎ ಮೀಸಲಾತಿಗಾಗಿ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ನಡೆಸಿದ್ದ ಹೋರಾಟ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪಂಚಮಸಾಲಿಗಳ ಹೋರಾಟ ಹತ್ತಿಕ್ಕಲು ಸರ್ಕಾರ ಲಾಠಿ ಬೀಸಿದೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಆರೋಪವನ್ನು ಮಾಡಿದ್ದಾರೆ.
ಇದರಲ್ಲಿ ಬೆನ್ನಲ್ಲೇ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ವಿರೋದ ವ್ಯಕ್ತಪಡಿಸಿದೆ.
ಯಾವದೇ ಕಾರಣಕ್ಕೂ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡದಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿರುವ ಕೆ ಎಮ್ ರಾಮಚಂದ್ರಪ್ಪ ನೇತೃತ್ವದ ನಿಯೋಗ, ಲಿಂಗಾಯತ ಪಂಚಮಸಾಲಿ ಸಮುದಾಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಮುಂದುವರೆದ ಸುಮುದಾಯವಾಗಿದೆ, ಹೀಗಾಗಿ 2ಎ ದಲ್ಲಿ ಸೇರಿಸದಂತೆ ಮನವಿ ಮಾಡಿದೆ.
ಒಂದು ವೇಳೆ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸಿದಲ್ಲಿ, ಹಾಲಿ ಇರುವ ಪ್ರವರ್ಗ 2ಎ ರಲ್ಲಿ ಬರುವ ತೀರಾ ಹಿಂದುಳಿದ ಜಾತಿಗಳಾದ ಆಗಸ, ಸವಿತಾ ಸಮಾಜ, ಈಡಿಗ, ತಿಗಳ, ಕುರುಬ, ದೇವಾಂಗ ಸಮಾಜ ಸೇರಿದಂತೆ ಹಿಂದುಳಿದ ಜಾತಿಗಳು ಮೀಸಲಾತಿಯಿಂದ ವಂಚಿತವಾಗುತ್ತವೆ ಎಂದು ಹೇಳಿದ್ದಾರೆ.
ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಒಂದು ವೇಳೆ ಪ್ರವರ್ಗ 2ಎ ಕ್ಕೆ ಸೇರಿಸಿಕೊಂಡಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದ್ದಾರೆ.