ಪಂಚಮಸಾಲಿ ಮೀಸಲಾತಿ ಹೋರಾಟದ ಸಂದರ್ಭದಲ್ಲಿ ಪೊಲೀಸರ ಲಾಠಿ ಚಾರ್ಜ್ ಖಂಡಿಸಿರುವ ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮಿಗಳು ರಾಜ್ಯ ಸರ್ಕಾರ ಸಮುದಾಯದ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಜಯ ಮೃತ್ಯುಂಜಯ ಸ್ವಾಮೀಜಿ, ಶಾಂತಿಯುತ ಪ್ರತಿಭಟನೆ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ ಎಂದರು. ಕಾಂಗ್ರೇಸ್ ಸರ್ಕಾರ ಪಂಚಮಸಾಲಿಗಳ ಮೀಸಲಾತಿ ಹೋರಾಟವನ್ನು ಹಗುರವಾಗಿ ಪರಿಗಣಿಸಿದೆ ಎಂದರು.
ನಿನ್ನೇ ನಡೆದ ಲಾಠಿ ಚಾರ್ಜ್ ನಲ್ಲಿ ಸಮುದಾಯದವರಿಗೆ ಬಹಳಷ್ಟು ಪೆಟ್ಟು ಬಿದ್ದಿದ್ದು, ಗಾಯಗೊಂಡಿದ್ದಾರೆ. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುವದು ಬೇಡ. ಸಮಾಜವೇ ಭರಿಸಲಿದೆ ಎಂದರು.
ಸುದ್ದಿಗೋಷ್ಟಿಯುದ್ಧಕ್ಕೂ ಎಡಿಜಿಪಿ ಮೇಲೆ ಹರಿಹಾಯ್ದ ಸ್ವಾಮೀಜಿಗಳು, ಲಾಠಿ ಚಾರ್ಜ್ ಮಾಡಲು ಕಾರಣರಾದ ಎಡಿಜಿಪಿ ಹಿತೇಂದ್ರರನ್ನು ಅಮಾನತು ಮಾಡುವಂತೆ ಶ್ರೀಗಳು ಆಗ್ರಹಿಸಿದ್ದಾರೆ.