ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ಮತ್ತೆ ಅಪಘಾತಕ್ಕೆ ಸಾಕ್ಷಿಯಾಗಿದೆ. ಯರಿಕೊಪ್ಪ ಬಳಿ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಬೆಂಗಳೂರಿನಿಂದ ಹೊರಟಿದ್ದ ಕಾರು, ಪುಣೆ ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿದ್ದವರು ಕೂದಲೆಳೆಯಲ್ಲಿ ಪಾರಾಗಿದ್ದು, ಒಂದಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಹುಬ್ಬಳ್ಳಿ ಧಾರವಾಡ ಬೈಪಾಸ್ ಡೆಡ್ಲಿ ರಸ್ತೆಯಾಗಿದ್ದು, ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಿವೆ.
