ಮೀಸಲಾತಿಗಾಗಿ ಆಗ್ರಹಿಸಿ, ಸುವರ್ಣ ಸೌಧ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿಗಳ ಮೇಲೆ ನಡೆದ ಲಾಠಿ ಪ್ರಹಾರ ನಡೆಸಿದ್ದನ್ನು ಖಂಡಿಸಿ, ರಾಷ್ಟ್ರೀಯ ಹೆದ್ದಾರಿ ತಡೆ ನಡೆಯಿತು.
ಹಿರೇಬಾಗೇವಾಡಿ ಟೋಲ್ ಬಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ ಲಿಂಗಾಯತ ಪಂಚಮಸಾಲಿ ಸಮುದಾಯ ಸರ್ಕಾರದ ವಿರುದ್ಧ ಕಿಡಿಕಾರಿತು.
ಸುಮಾರು ಅರ್ಧ ಘಂಟೆಗಳ ಕಾಲ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೋಲಿಸರು ವಶಕ್ಕೆ ಪಡೆದರು.
ಇದೇ ವೇಳೆ ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಲಾಠಿ ಪ್ರಹಾರ ನಡೆಸಿದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಆಗ್ರಹಿಸಿದರು.
