ಧಾರವಾಡದ ಬೇಂದ್ರೆ ಭವನದ ಎದುರು ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಮುಗದ ಗ್ರಾಮಕ್ಕೆ ಹೊರಟಿದ್ದ ಬಸ್ಸು, ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಮೇಲಿದ್ದ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.
ಸ್ಥಳಕ್ಕೆ ಸಂಚಾರಿ ಹಾಗೂ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.