ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸಿಹಿ ಸುದ್ದಿ ನೀಡಿದ್ದಾರೆ. ಗ್ರಾಮ ಪಂಚಾಯತ ಸದಸ್ಯರ ಬಹುದಿನಗಳ ಬೇಡಿಕೆ ಈಡೇರುವ ಕಾಲ ಕೂಡಿ ಬಂದಿದೆ.
ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಸದಸ್ಯರ, ಗೌರವ ಧನ ಏರಿಕೆಗೆ ಸಂಬಂಧಿಸಿದಂತೆ ಮೂರು ತಿಂಗಳ ಒಳಗಾಗಿ ವರದಿ ತರಿಸಿಕೊಂಡು ಗೌರವ ಧನ ಎಷ್ಟು ಹೆಚ್ಚಳ ಮಾಡಬೇಕೆಂಬುದರ ಬಗ್ಗೆ ಸರ್ಕಾರ ನಿರ್ಧಾರ ಪ್ರಕಟ ಮಾಡಲಿದೆ.