ಹೊನ್ನಾವರ ಬಳಿ ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ ಬಸ್ ಪಲ್ಟಿಯಾದ ಪರಿಣಾಮ 34 ಮಕ್ಕಳಿಗೆ ಗಾಯಗಳಾಗಿವೆ.
ಕೋಲಾರ ಜಿಲ್ಲೆಯ ಮಾಸ್ತಿಹಳ್ಳಿಯ ಪ್ರೌಡಶಾಲೆಯ ಮಕ್ಕಳು ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದರು ಎನ್ನಲಾಗಿದೆ.
ದುರ್ಘಟನೆಯಲ್ಲಿ ನಾಲ್ವರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. 30 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.