ಹಿನ್ನೆಲೆ ಗಾಯಕ ಅಭಿಜಿತ ಭಟ್ಟಾಚಾರ್ಯ ಮಹಾತ್ಮಾ ಗಾಂಧೀಜಿಯವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಮಹಾತ್ಮ ಗಾಂಧಿ, ಪಾಕಿಸ್ತಾನದ ರಾಷ್ಟ್ರಪಿತ ಎಂದು ಬಾಯಿ ಹರಿಬಿಟ್ಟಿದ್ದಾರೆ. ಹಿನ್ನೆಲೆ ಗಾಯಕ ಅಭಿಜಿತ್ ಭಟ್ಟಾಚಾರ್ಯ ಈ ಮಾತನ್ನು ಹೇಳಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಗಾಂಧಿ, ಪಾಕಿಸ್ತಾನದ ಸೃಷ್ಟಿಯಲ್ಲಿ ಪಾತ್ರವನ್ನು ವಹಿಸಿದ್ದಾರೆ. ಆದ್ದರಿಂದ, ಅವರು ಪಾಕಿಸ್ತಾನಕ್ಕೆ ರಾಷ್ಟ್ರಪಿತರು,ಭಾರತಕ್ಕಾಗಿ ಅಲ್ಲ” ಎಂದು ಅಭಿಜೀತ್ ಭಟ್ಟಾಚಾರ್ಯ ದೇಶದ್ರೋಹಿ ಹೇಳಿಕೆ ನೀಡಿದ್ದಾರೆ.
