ಹುಬ್ಬಳ್ಳಿಯ ಉಣಕಲ್ ನಲ್ಲಿ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ನಡೆದ ಸಿಲಿಂಡರ್ ಸೋರಿಕೆ ದುರಂತದಲ್ಲಿ ಮಡಿದವರ ಸಂಖ್ಯೆ ಹೆಚ್ಚಾಗುತ್ತಿದ್ದೆ.
ಇಂದು ಸಹ ಒಬ್ಬ ಮಾಲಾಧಾರಿ ಸಾವನ್ನಪ್ಪಿದ್ದು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5 ಕ್ಕೇ ಏರಿದೆ.
ದುರಂತದಲ್ಲಿ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ರಾಜು ಮೂಗೇರಿ, ಲಿಂಗರಾಜು ಬೀರನೂರ ಸಾವನ್ನಪ್ಪಿದ್ದು, ಇಂದು ಶಂಕರ್ ಚವ್ಹಾಣ ಕೊನೆಯುಸಿರೆಳೆದಿದ್ದಾರೆ.
ಕಿಮ್ಸ್ ಆಸ್ಪತ್ರೆಯಲ್ಲಿ ಇನ್ನು ನಾಲ್ಕು ಜನ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
