ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಫುಲ್ ಆಕ್ಟಿವ್ ಆಗಿದ್ದಾರೆ. ಎರಡು ಬಾರಿ ಶಾಸಕರಾಗಿ ಒಮ್ಮೆ ಮಂತ್ರಿಯಾಗಿ ಕೆಲಸ ಮಾಡಿರುವ ಅವರು ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.
ಭಾರತೀಯ ಜನತಾ ಪಕ್ಷದ ಸಂಘಟನಾ ಪರ್ವದ ಹಿನ್ನೆಲೆಯಲ್ಲಿ ಕರ್ಲವಾಡ ಗ್ರಾಮದಲ್ಲಿ ಬೂತ್ ಮಟ್ಟದ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ.
ಕ್ಷೇತ್ರದಾಧ್ಯಂತ ಕಾರ್ಯಕರ್ತರನ್ನು ಹಾಗೂ ಅಭಿಮಾನಿಗಳನ್ನು ಭೇಟಿ ಮಾಡಿ ಅವರ ಅಹವಾಲುಗಳಿಗೆ ದ್ವನಿಯಾಗುತ್ತಿದ್ದಾರೆ.
