ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಲಿತ ಚಳುವಳಿಯ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಲಕ್ಷ್ಮಿನಾರಾಯಣ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಮುಖ್ಯಮಂತ್ರಿಗಳು, ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಲಕ್ಷ್ಮೀನಾರಾಯಣ್ ಅವರ ಅಂತ್ಯ ಸಂಸ್ಕಾರದ ವೇಳೆ ಪೊಲೀಸ್ ಗೌರವದ ವ್ಯವಸ್ಥೆ ಮಾಡುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚನೆ ನೀಡಿದರು.
