ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರ ಬ್ರಾಹ್ಮಣ ವಿಧ್ಯಾರ್ಥಿಗಳಿಗೆ ಶಿಷ್ಯವೇತನ ಮಂಜೂರು ಮಾಡಿದೆ.
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ.
ಸಿದ್ದರಾಮಯ್ಯ ಕೇವಲ ಮುಸ್ಲಿಮ್ ತುಷ್ಟಿಕರಣದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪ ಹೊರಿಸಿದ್ದ ವಿರೋದ ಪಕ್ಷದವರಿಗೆ ತಿರುಗೇಟು ಕೊಟ್ಟಿದ್ದಾರೆ.
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ನೀತಿಯಡಿ ಸಿದ್ದರಾಮಯ್ಯನವರ ಕಾಂಗ್ರೇಸ್ ಸರ್ಕಾರ ಇದೀಗ ಬ್ರಾಹ್ಮಣ ವಿಧ್ಯಾರ್ಥಿಗಳಿಗೂ ಶಿಷ್ಯವೇತನ ಬಿಡುಗಡೆ ಮಾಡಿದೆ.