ರಾಜ್ಯ ಕಾಂಗ್ರೇಸ್ ಸರ್ಕಾರದ ಪ್ರಮುಖ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.
2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ, ಸ್ನಾಕೋತ್ತರ ಪದವಿ ಮತ್ತು ಡಿಪ್ಲೋಮ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಯುವನಿಧಿ ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು, ಅಗತ್ಯ ಮಾಹಿತಿ ನೀಡುವ ಬಿತ್ತಪತ್ರ ಹಾಗೂ ಪ್ರಚಾರ ಸಾಮಗ್ರಿಗಳನ್ನು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ನೇತೃತ್ವದಲ್ಲಿ ಬಿಡುಗಡೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ ಉಪಸ್ಥಿತರಿದ್ದರು.
ಯುವನಿಧಿ ಯೋಜನೆಯಡಿ ಪದವೀಧರರಿಗೆ 3,000 ಹಾಗೂ ಡಿಪ್ಲೋಮ ತೇರ್ಗಡೆಯಾದವರಿಗೆ, 1,500 ನಿರುದ್ಯೋಗ ಭತ್ಯೆಯನ್ನು 2 ವರ್ಷಗಳವರೆಗೆ ನೀಡಲಾಗುವುದು.
2024 ರಲ್ಲಿ ಪದವಿ, ಡಿಪ್ಲೊಮ ತೇರ್ಗಡೆಯಾಗಿ 180 ದಿನ ನಿರುದ್ಯೋಗಿಗಳಾದ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಿರುತ್ತಾರೆ.
ಯೋಜನೆಯ ಫಲಾನುಭವಿಯಾಗಲು ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣ https://sevasindhugs.karnataka.gov.in/ ದಲ್ಲಿ ಅರ್ಜಿ ಸಲ್ಲಿಸುವಂತೆ ಧಾರವಾಡ ಜಿಲ್ಲಾಡಳಿತ ಮನವಿ ಮಾಡಿದೆ.