ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ ವಿರುದ್ದ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಜನೆವರಿ 9 ರಂದು ಹುಬ್ಬಳ್ಳಿ ಬಂದ್ ಗೆ ಕರೆ ಕೊಡಲಾಗಿದೆ.
ವಿವಿಧ ಸಂಘಟನೆಗಳು ಹುಬ್ಬಳ್ಳಿ ಬಂದ್ ಗೆ ಕರೆ ಕೊಟ್ಟಿದ್ದು, ಅಂದು ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿ, ಬಂದ್ ಗೆ ಬೆಂಬಲ ಸೂಚಿಸಬೇಕು ಎಂದು ಸಂಘಟನೆ ಮುಖಂಡರು ಮನವಿ ಮಾಡಿದ್ದಾರೆ.