ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದ್ರೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಮೀಸಲಾತಿ ಕುರಿತಂತೆ ಪ್ರಕರಣ ಕೋರ್ಟ ಮೆಟ್ಟಲೇರಿದ್ದು, ಅಲ್ಲಿಯೇ ಇತ್ಯರ್ಥವಾಗಬೇಕು ಎಂದು ಹೇಳಿದ್ದಾರೆ.
ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.