ನಕ್ಸಲ್ ಮುಖಂಡ ವಿಕ್ರಂ ಗೌಡ ಎನ್ಕೌಂಟರ್ ಬಳಿಕ ಈಗ ಉಳಿದಿರುವ ನಕ್ಷಲೀಯರು ಸಮಾಜದ ಮುಖ್ಯವಾಹಿನಿಗೆ ಬರಲು ಮುಂದಾಗಿದ್ದಾರೆ ಎನ್ನಲಾಗಿದೆ.
ನಕ್ಸಲ್ ಚಟುವಟಿಕೆ ಬಿಟ್ಟು ಬರಲಿರುವ ನಕ್ಷಲರು ನಾಳೆ ಶರಣಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಂಡಗಾರು ಲತಾ, ಸುಂದರಿ ಕುಲ್ಲೂರು, ವನಜಾಕ್ಷಿ ಬಾಳೆಹೊಳೆ, ಆಂಧ್ರಪ್ರದೇಶ ಮೂಲದ ಮಾರೆಪ್ಪ ಅರೋಲಿ, ಕೆ.ವಸಂತ, ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ ನಕ್ಸಲ್ ಜೀಶ, ಶರಣಾಗಲು ಸಜ್ಜಾಗಿದ್ದಾರೆಂದು ಹೇಳಲಾಗಿದೆ.
ನಕ್ಸಲರ ಶರಣಾಗತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಕಳೆದ ವಾರವಷ್ಟೇ ಮುಖ್ಯಮಂತ್ರಿಗಳು ನಕ್ಷಲ್ ಚಟುವಟಿಕೆ ಬಿಟ್ಟು ಬರುವ ನಕ್ಸಲರಿಗೆ ಶರಣಾಗುವಂತೆ ಮನವಿ ಮಾಡಿದ್ದರು.