ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರು, ಧಾರವಾಡಕ್ಕೆ ಮತ್ತೊಂದು ಕೊಡುಗೆ ನೀಡಿದ್ದಾರೆ.
ಧಾರವಾಡದ ಕೃಷಿ ವಿಶ್ವ ವಿದ್ಯಾಲಯದಲ್ಲಿ X-band Doppler RADAR (ಎಕ್ಸ್-ಬ್ಯಾಂಡ್ ಡಾಪ್ಲರ್ ರಾಡಾರ್) ಸ್ಥಾಪನೆಯಾಗಲಿದ್ದು, ಇದು 150 ರಿಂದ 175 ಕಿಲೋಮೀಟರಗಳವರೆಗೂ ನಿಖರವಾದ ಹವಾಮಾನ ಬದಲಾವಣೆ ಮತ್ತು ಹವಾಮಾನ ವೈಪರಿತ್ಯದ ಬಗ್ಗೆ ಪರಿಪೂರ್ಣ ಮಾಹಿತಿಯನ್ನು ನೀಡುತ್ತದೆ.
ಮಳೆಯ ಮುನ್ಸೂಚನೆ, ಒಣಹವೆಯ ಮಾಹಿತಿ, ತಾಪಮಾನದ ಏರಿಳಿತ ಸೇರಿದಂತೆ ಹವಾಮಾನದ ಏರುಪೇರುಗಳ ನಿಖರ ಮಾಹಿತಿಯನ್ನು ಈ ರಾಡಾರ ನೀಡಲಿದೆ.
ಇದು ರೈತರಿಗೆ ಬೆಳೆಹಾನಿ, ಬೆಳೆ ನಷ್ಟದಿಂದ ಪಾರುಮಾಡುವುದರ ಜೊತೆಗೆ ಕೃಷಿ ಚಟುವಟಿಕೆಗಳ ಸಿದ್ಧತೆಗೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರು ಹೇಳಿದ್ದಾರೆ.