2005 ರಲ್ಲಿ ನಡೆದ ಸಿಪಿಎಮ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನ ಆರ್ ಎಸ್ ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.
ಕೇರಳದ ಕನ್ನಪುರಂ ಚುಂಡಾದ 25 ವರ್ಷದ ಸಿಪಿಐ(ಎಂ) ಸದಸ್ಯ ರಿಜಿತ್ ಶಂಕರನ್ ಅವರನ್ನು ಅಕ್ಟೋಬರ್ 3, 2005 ರಂದು ಆ ಪ್ರದೇಶದಲ್ಲಿ ಎರಡು ಪಕ್ಷಗಳ ನಡುವೆ ನಡೆದ ಗಲಭೆಯಲ್ಲಿ ಕೊಲೆ ಮಾಡಲಾಗಿತ್ತು.
ರಿಜಿತ್ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆತನ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರು. ಘಟನೆಯಲ್ಲಿ ರಿಜಿತ್ ಜೊತೆ ಮೂವರಿಗೆ ಗಾಯಗಳಾಗಿದ್ದವು.
ಜನವರಿ 4ರಂದು ತಲಶ್ಶೇರಿಯ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಯನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು.
ತಲಶ್ಶೇರಿಯ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ತೀರ್ಪು ನೀಡಿದ್ದು, 9 ಜನ ಆರ್ ಎಸ್ ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ನೀಡಿದೆ.
