ಧಾರವಾಡ ಜಿಲ್ಲೆಯಲ್ಲಿ 2022 ರಿಂದ ಇವತ್ತಿನವರೆಗೆ ಒಟ್ಟು 140 ಗರ್ಭಿಣಿಯರು ಸಾವನ್ನಪ್ಪಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
HMV ವೈರಸ್ ಬಗ್ಗೆ ತೆಗೆದುಕೊಳ್ಳಬಹುದಾದ ಮುನ್ನೇಚ್ಚರಿಕೆ ಹಿನ್ನೆಲೆಯಲ್ಲಿ ಅವರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
2022-23 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿ 62 ಗರ್ಭಿಣಿಯರು ಸಾವನ್ನಪ್ಪಿದ್ದು, ಈ ಪೈಕಿ ಧಾರವಾಡ ಜಿಲ್ಲೆಯ 24 ಗರ್ಭಿಣಿಯರು ಸಾವನ್ನಪ್ಪಿದ್ದಾರೆ.
2023-24 ರ ಸಾಲಿನಲ್ಲಿ 43 ಗರ್ಭಿಣಿಯರು ಸಾವನ್ನಪ್ಪಿದ್ದು , ಈ ಪೈಕಿ ಧಾರವಾಡ ಜಿಲ್ಲೆಯ 12 ಗರ್ಭಿಣಿಯರು ಸಾವನ್ನಪ್ಪಿದ್ದಾರೆ.
2024-25 ರ ಸಾಲಿನಲ್ಲಿ ಅಂದರೆ, ಇವತ್ತಿನವರೆಗೆ 35 ಗರ್ಭಿಣಿಯರು ಸಾವನ್ನಪ್ಪಿದ್ದು, ಈ ಪೈಕಿ ಧಾರವಾಡ ಜಿಲ್ಲೆಯ 11 ಗರ್ಭಿಣಿಯರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಪ್ರಸೂತಿಗೆಂದು ಧಾರವಾಡ ಜಿಲ್ಲಾ ಆಸ್ಪತ್ರೆಗೆ ಬೇರೆ ಜಿಲ್ಲೆಗಳಿಂದ ಬರುವವರ ಸಂಖ್ಯೆ ಜಾಸ್ತಿಯಾಗಿದ್ದು, ನಾನಾ ಕಾರಣಗಳಿಂದ ಗರ್ಭಿಣಿಯರು ಮೃತಪಟ್ಟಿದ್ದಾರೆಂದು ದಿವ್ಯ ಪ್ರಭು ತಿಳಿಸಿದ್ದಾರೆ.