ಹುಬ್ಬಳ್ಳಿಯ ಪಾಟೀಲ ಗಲ್ಲಿಯಲ್ಲಿ ಅಮಾನುಷ ಘಟನೆಯೊಂದು ನಡೆದಿದೆ.
ಪಾಪಿಗಳು ನವಜಾತ ಗಂಡು ಶಿಶುವನ್ನ ಪ್ಲಾಸ್ಟಿಕ್ ಕವರ್ ನಲ್ಲಿ ಎಸೆದು ಹೋಗಿದ್ದಾರೆ.
ಇಂದು ಬೆಳಗಿನ ಜಾವ ಸಾರ್ವಜನಿಕ ಸ್ಥಳದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು,
ಪೌರಕಾರ್ಮಿಕರು ಕಸ ಗೂಡಿಸುವಾಗ ಈ ನವಜಾತ ಪತ್ತೆಯಾಗಿದೆ.
ಪಾಪಿಗಳ ಕ್ರೌರ್ಯಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಸ್ಥಳೀಯರು
ಸ್ಥಳಕ್ಕೆ ಬೆಂಡಿಗೇರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಬೆಂಡಿಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.
