ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ವಿವಿಧ ಸಂಘಟನೆಗಳು ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಕೊಟ್ಟಿವೆ.
ನಾಳೆ ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಬಂದ್ ನಡೆಸಲಾಗುವದು ಎಂದು ಸಂಘಟಕರು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ, ಅಂಬೇಡ್ಕರ ಸರ್ಕಲ್, ಚನ್ನಮ್ಮ ಸರ್ಕಲ್, ಕೇಶ್ವಾಪುರ ಸರ್ಕಲ್, ದುರ್ಗದಬೈಲ್, ಹಳೇ ಹುಬ್ಬಳ್ಳಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯಲಿದೆ.
ಧಾರವಾಡದಲ್ಲಿ ಗಾಂಧಿ ಚೌಕ್, ಶ್ರೀನಗರ ಸರ್ಕಲ್, ಟೋಲ್ ನಾಕಾ, ಜ್ಯುಬಿಲಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯಲಿದೆ.
ಏನೆಲ್ಲಾ ಸಿಗತ್ತೆ
ನಾಳಿನ ಬಂದ್ ಸಂದರ್ಭದಲ್ಲಿ ಆಸ್ಪತ್ರೆಗಳು, ಔಷಧಿ ಅಂಗಡಿಗಳು, ಬ್ಯಾಂಕುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
ಇನ್ನುಳಿದಂತೆ ಅವಳಿ ನಗರದಲ್ಲಿ ಸಾರಿಗೆ ಸಂಪರ್ಕ ಸ್ಥಗಿತಗೊಳ್ಳುವ ಸಾಧ್ಯತೆ ಇದ್ದು, ಆಟೋ ರಿಕ್ಷಾಗಳು ರಸ್ತೆಗಿಳಿಯಲ್ಲ ಎನ್ನಲಾಗಿದೆ.
ವಿವಿಧ ಸಂಘಟನೆಗಳು ಕರೆ ನೀಡಿರುವ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕಾಂಗ್ರೇಸ್ ಸೇರಿದಂತೆ, ಪ್ರಗತಿಪರ ಸಂಘಟನೆಗಳು ಹಾಗು ಕನ್ನಡ ಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅವಳಿ ನಗರದಲ್ಲಿ ವ್ಯಾಪಕ ಪೊಲೀಸ ಬಂದುಬಸ್ತ ಮಾಡಲಾಗಿದೆ.