ವಾಣಿಜ್ಯ ನಗರಿ ಹುಬ್ಬಳ್ಳಿ ಸಂಪೂರ್ಣ ಬಂದಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಾ. ಅಂಬೇಡ್ಕರರ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಕೊಡಲಾಗಿದೆ.
ಬೆಳಿಗ್ಗೆ 6 ಘಂಟೆಗೆ ರಸ್ತೆಗಿಳಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ನೂರಕ್ಕೂ ಹೆಚ್ಚು ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ.
ಬಂದ್ ನಿಂದಾಗಿ ಹುಬ್ಬಳ್ಳಿಯ ರಸ್ತೆಗಳು ಬಿಕೋ ಎನ್ನುತ್ತಿವೆ. ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದ್ರೆ, ಹುಬ್ಬಳ್ಳಿಯಲ್ಲಿ ಶಾಂತಿಯುತ ಪ್ರತಿಭಟನೆ ಮುಂದುವರೆದಿದೆ.