ಮೈಸೂರು ವಿಶ್ವವಿದ್ಯಾಲಯದವರು ಡಾಕ್ಟರೇಟ್ ನೀಡಲು ಮುಂದೆ ಬಂದಾಗ ಅದನ್ನೇ ವಿನಯವಾಗಿ ಬೇಡ ಅಂದಿದ್ದೆ.
ನಾನೇನು ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವನಲ್ಲ, ಕಳೆದ 45 ವರ್ಷಗಳಿಂದ ಅಧಿಕಾರದ ವಿವಿಧ ಸ್ಥಾನಗಳಲ್ಲಿ ಇದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, ಡಾಕ್ಟರೇಟ್ ಪದವಿ ಬೇಡ ಅಂದವನು ನಾನು, ರಸ್ತೆಗೆ ಹೆಸರಿಡಿ ಎಂದು ಯಾರ ಬಳಿಯೂ ಹೇಳಿಲ್ಲ, ಅದರ ಅಗತ್ಯವು ನನಗಿಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.
ಯಾವತ್ತೂ ನನ್ನ ಹೆಸರು ರಸ್ತೆಗೋ, ಕಟ್ಟಡಗಳಿಗೋ ಇಡಿ ಎಂದು ಯಾರ ಬಳಿ ಹೇಳಿಲ್ಲ. ಅದರ ಅಗತ್ಯವೂ ನನಗಿದೆ ಎಂದು ವಿರೋಧಿಗಳಿಗೆ ಎದಿರೇಟು ಇದೆ.
