ಛತ್ತೀಸ್‌ಗಡದಲ್ಲಿ ಶಿಕ್ಷಕರ ಹುದ್ದೆ ಭರ್ತಿ ಮಾಡುವಂತೆ ಆಗ್ರಹಿಸಿ ನಿರುದ್ಯೋಗ ಪದವೀಧರರು ಎರಡು ಕಿಲೋಮೀಟರನಷ್ಟು ದೀಡ ನಮಸ್ಕಾರ ಹಾಕಿದ ವಿಡಿಯೋ ವೈರಲ್ ಆಗಿದೆ.
ಈ ವಿಡಿಯೋ ದೇಶದ ಯುವಕರ ದುಸ್ಥಿತಿಗೆ ಒಂದು ಸಣ್ಣ ಉದಾಹರಣೆಯಾಗಿದೆ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ 33 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, 1 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಬಿಜೆಪಿ ಸರ್ಕಾರ ಈಗ ಇದ್ದಕ್ಕಿದ್ದಂತೆ 3 ಸಾವಿರ ಶಿಕ್ಷಕರನ್ನು ವಜಾ ಮಾಡಿದೆ.
ಯುವತಿಯರು ವಿಪರೀತ ಚಳಿಯಲ್ಲಿ ರಸ್ತೆಯ ಮೇಲೆ ಮಲಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.