ಮಧುರೈನಲ್ಲಿ ಹದಿಹರೆಯದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಬಿಜೆಪಿಯ ರಾಜ್ಯ ಆರ್ಥಿಕ ವಿಭಾಗದ ಮುಖ್ಯಸ್ಥ ಎಂಎಸ್ ಶಾ ಅವರನ್ನು ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಬಂಧಿಸಲಾಗಿದೆ.
ಹುಡುಗಿಯ ತಂದೆ ಕಳೆದ ವರ್ಷ ಮಧುರೈ ದಕ್ಷಿಣ ಮಹಿಳಾ ಪೊಲೀಸ್ ಠಾಣೆಯಲ್ಲಿ (ಎಡಬ್ಲ್ಯೂಪಿಎಸ್) ದೂರು ದಾಖಲಿಸಿದ್ದರು. ಶಾ ಎಂಬಾತ, ತನ್ನ ಮಾಜಿ ಪತ್ನಿಯೊಂದಿಗೆ ಸಂಬಂಧ ಹೊಂದಿದ್ದಾನೆ ಮತ್ತು ಹದಿಹರೆಯದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು.
ದೂರಿನ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಪ್ರಕರಣದ ತನಿಖೆಗೆ ಆದೇಶಿಸಿತ್ತು. ಜನವರಿ 13ರಂದು, ತಲೆಮರೆಸಿಕೊಂಡಿದ್ದ ಷಾ ಅವರನ್ನು ಹೈಕೋರ್ಟ್ ಆದೇಶದಂತೆ ಬಂಧಿಸಲಾಗಿದೆ.