ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೊಸ ಕಾನೂನನ್ನು ಜಾರಿಗೆ ತರಲು ಹೊರಟಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಇರಬೇಕಾದ ಅರ್ಹತೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.
ಸ್ಥಳೀಯ ಸಂಸ್ಥೆಗಳಾದ ಪುರಸಭೆ ಮತ್ತು ಪಂಚಾಯತಿ ಚುನಾವಣೆಯಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮಾತ್ರ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೊಡುವ ಕಾನೂನು ಆಂಧ್ರಪ್ರದೇಶದಲ್ಲಿ ಜಾರಿಗೆ ಬರಲಿದೆ.
ಮೂರು ದಶಕಗಳ ಹಿಂದಿನ ಕಾನೂನನ್ನು ರದ್ದುಗೊಳಿಸಿದ ಕೆಲವು ತಿಂಗಳ ನಂತರ ಚಂದ್ರಬಾಬು ಈ ಘೋಷಣೆ ಮಾಡಿದ್ದಾರೆ. ಕ್ಷೀಣಿಸುತ್ತಿರುವ ಜನಸಂಖ್ಯೆಯ ಸಮಸ್ಯೆಯನ್ನು ಪರಿಹರಿಸಲು ತೆಲುಗು ಜನರು ಹೆಚ್ಚು ಮಕ್ಕಳನ್ನು ಹೊಂದಬೇಕು ಎಂದು ಚಂದ್ರಬಾಬು ನಾಯ್ಡು ಕಳೆದ ಒಂದು ದಶಕದಿಂದ ಪ್ರತಿಪಾದಿಸುತ್ತಿದ್ದಾರೆ.
ಕಳೆದ ವರ್ಷ ಅವರು ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳನ್ನು ಪ್ರೋತ್ಸಾಹಿಸುವ ಅಗತ್ಯತೆಯ ಬಗ್ಗೆ ಪ್ರತಿಕ್ರಿಯಿಸಿದ್ದರು.