ನಿವೃತ್ತರ ಸ್ವರ್ಗ ಎಂದು ಕರೆಸಿಕೊಳ್ಳುವ ಧಾರವಾಡದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.
ಅನಾರೋಗ್ಯ ಪೀಡಿತ ಸುರೇಶ ಕುಲಕರ್ಣಿ ಎಂಬ 80 ವಯಸ್ಸಿನ ವೃದ್ಧರು ಭಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುರೇಶ ಕುಲಕರ್ಣಿ, ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
80 ರ ವೃದ್ಧ ಸುರೇಶ ಕುಲಕರ್ಣಿ, ಭಾವಿಯಲ್ಲಿ ಜಿಗಿಯುವ ದೃಶ್ಯ ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿದ್ದಾರೆ.
ಮೃತ ಸುರೇಶ ಕುಲಕರ್ಣಿ ಶವವನ್ನು ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಪ್ರಯತ್ನ ಮಾಡುತ್ತಿದ್ದಾರೆ.