ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು, ಮೊನ್ನೆ ಕಿತ್ತೂರ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಸಹ ಆರೋಗ್ಯ ವಿಚಾರಿಸಿದರು.
ಲಕ್ಷ್ಮೀ ಹೆಬ್ಬಾಳಕರ ಅವರು, ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಧಾಖಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.