ಬೀದರನಲ್ಲಿ ATM ಗೆ ಹಾಕಲು ಬಂದಿದ್ದ ಹಣವನ್ನು ದರೋಡೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಹಾಡುಹಗಲೇ ಸಹಕಾರಿ ಬ್ಯಾಂಕ್ ದರೋಡೆ ಮಾಡಿದ ಘಟನೆ ಮಂಗಳೂರಿನ ಉಲ್ಲಾಳದಲ್ಲಿ ನಡೆದಿದೆ.
ಉಲ್ಲಾಳದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿ, ಬ್ಯಾಂಕಿನಲ್ಲಿದ್ದ ಹಣ ಹಾಗೂ ಬಂಗಾರದ ಆಭರಣಗಳನ್ನು ಎಗರಿಸಿ ಪರಾರಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂದಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, ತಕ್ಷಣ ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ.