ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಬೆಳೆವಣಿಗೆ ನಡೆದಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಬಂಧಿಸಿದೆ ಎನ್ನಲಾದ 300 ಕೋಟಿ ಬೆಲೆ ಬಾಳುವ ಆಸ್ತಿಯನ್ನು ವಶಪಡಿಸಿಕೊಂಡಿದೆ ಎಂದು ಜಾರಿ ನಿರ್ಧೆಶನಾಲಯ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.
ಮುಡಾ ಸ್ವಾಧೀನಪಡಿಸಿಕೊಂಡಿರುವ ಮೂರು ಎಕರೆ 16 ಗುಂಟೆ ಭೂಮಿಗೆ ಪರಿಹಾರವಾಗಿ ಸಿದ್ದರಾಮಯ್ಯನವರು, ತಮ್ಮ ಪತ್ನಿ ಬಿಎಂ ಪಾರ್ವತಿಗೆ 14 ಪ್ರಮುಖ ಆಸ್ತಿಯನ್ನು ಪಡೆಯಲು ರಾಜಕೀಯ ಪ್ರಭಾವವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ ತನಿಖೆಯ ಭಾಗವಾಗಿದೆ.
ಜಾರಿ ನಿರ್ಧೆಶನಾಲಯ 142 ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿದೆ. ಮುಡಾ ಮಾಜಿ ಆಯುಕ್ತ ಡಿ ಬಿ ನಟೇಶ್ ಅವರು ಈ ನಿವೇಶನಗಳ ಪರಿಹಾರದ ಅಕ್ರಮ ಹಂಚಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.