ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಇಂದು ನವದೆಹಲಿ ಕ್ಷೇತ್ರದಲ್ಲಿ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ದೆಹಲಿಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಲು ಬಂದಿದ್ದ ಕೇಜ್ರಿವಾಲ್ ರ ಕಾರಿಗೆ ಅಡ್ಡಬಂದ ಬಿಜೆಪಿ ಕಾರ್ಯಕರ್ತರು ಕಾರಿನ ಮೇಲೆ ದಾಳಿ ಮಾಡಿದ್ದಾರೆಂದು ಆಪ್ ಪಕ್ಷ ಆರೋಪಿಸಿದೆ.
ತಕ್ಷಣ ಕೇಜ್ರಿವಾಲ್ ರಕ್ಷಣೆಗೆ ಬಂದ ಪೊಲೀಸರು ಬಿಗಿ ಪೊಲೀಸ್ ಬಂದುಬಸ್ತ ಒದಗಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಮುಖಂಡರು ವಿಡಿಯೋ ತುಣುಕೊಂದನ್ನು ಬಿಡುಗಡೆ ಮಾಡಿದ್ದಾರೆ.