ನವದೆಹಲಿಯ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಅಂತಿಮ ಸ್ಪರ್ಧೆಯಲ್ಲಿ ಭಾರತದ ಮಹಿಳಾ ತಂಡ ಐತಿಹಾಸಿಕ ಜಯ ಸಾಧಿಸಿದೆ.
ಅಂತಿಮ ಪಂದ್ಯದಲ್ಲಿ, ಭಾರತದ ಮಹಿಳಾ ಖೋ ಖೋ ತಂಡ, ನೇಪಾಳ ತಂಡದ ವಿರುದ್ಧ ಅಮೋಘ ಜಯ ಸಾಧಿಸಿ ವಿಶ್ವಕಪ್ ತನ್ನದಾಗಿಸಿಕೊಂಡಿದೆ.
ಭಾರತದ ಹೆಮ್ಮೆಯ ಯುವತಿಯರು, ವಿಶ್ವಕಪ್ ಖೋ ಖೋ ಫೈನಲ್ ಪಂದ್ಯಾವಳಿಯಲ್ಲಿ ಜಯಗಳಿಸಿ ಭಾರತಕ್ಕೆ ವಿಶ್ವಕಪ್ ತಂದುಕೊಟ್ಟಿದ್ದಾರೆ.
ಇನ್ನು ಈ ಪಂದ್ಯಾವಳಿಯಲ್ಲಿ ಭಾಗವಹಿಸಿ ದೇಶದ ಕೀರ್ತಿ ಹೆಚ್ಚಿಸಿದ ನಮ್ಮ ರಾಜ್ಯದ ಯುವತಿ, ಟಿ ನರಸೀಪುರ ಕ್ಷೇತ್ರದ ಕುರುಬೂರು ಗ್ರಾಮದ ಕ್ರೀಡಾಪಟು ಕುಮಾರಿ ಚೈತ್ರ ಅವರ ಸಾಧನೆಗೆ ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಅಭಿನಂದಿಸಿದ್ದಾರೆ.