ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ ಎಂದಿರುವ ಅವರು, ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಕುಟುಂಬಗಳಿಗೆ ಧೈರ್ಯ ತುಂಬಿದ್ದಾರೆ.
ಇದೇ ವೇಳೆ ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.