ತೊಗರಿಗೆ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಇಂದು ಕಲಬುರಗಿ ಬಂದ್ ಗೆ ಕರೆ ಕೊಟ್ಟಿವೆ.
“ತೊಗರಿ ಖನಜ” ಎಂದು ಹೆಸರಾಗಿರುವ ಕಲಬುರ್ಗಿಯಲ್ಲಿ ತೊಗರಿ ಬೆಲೆ ಕುಸಿದಿದೆ.
ತೊಗರಿ ಬೆಂಬಲ ಬೆಲೆ ಕ್ವಿಂಟಾಲ್ಗೆ 7500 ನಿಗದಿ ಮಾಡಿದ್ದು, ಅದನ್ನು 7500 ರೂಪಾಯಿಯಿಂದ 12 ಸಾವಿರ ರೂಪಾಯಿಗೆ ಹೆಚ್ಚಿಸಲು ಆಗ್ರಹಿಸಿ ಬಂದ್ ಗೆ ಕರೆ ಕೊಡಲಾಗಿದೆ.
ಕರ್ನಾಟಕ ಪ್ರಾಂತ ರೈತ ಸಂಘ ಕರೆ ನೀಡಿರುವ ಕಲಬುರಗಿ ಬಂದ್ ಗೆ ವಿವಿಧ ಸಂಘಟನೆಗಳ ಸಾಥ್ ನೀಡಿವೆ. ಬೆಳಿಗ್ಗೆ 6 ಗಂಟೆಯಿಂದಲೇ ರಸ್ತೆ ತಡೆ ಆರಂಭವಾಗಿದ್ದು, ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿವೆ.
ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.