ತರಕಾರಿ ತುಂಬಿಕೊಂಡು ಹೊರಟಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ 9 ಜನ ಸಾನನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಬಳಿ ಈ ಘಟನೆ ಘಟನೆ ನಡೆದಿದೆ. ಈ ಘಟನೆಯಲ್ಲಿ 16 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.
ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಇವರೆಲ್ಲ ಕುಮಟಾಕ್ಕೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.