ಯಮಕನಮರಡಿಯಿಂದ ಹಿಡಕಲ್ ಡ್ಯಾಮ್ ಗೆ ಕೂಲಿ ಕೆಲಸಕ್ಕೆಂದು ಹೋಗುತ್ತಿದ್ದ ವೇಳೆ ಗೂಡ್ಸ್ ವಾಹನ ಪಲ್ಟಿಯಾಗಿ 25 ಜನ ಕಾರ್ಮಿಕರಿಗೆ ಗಾಯಗಳಾಗಿವೆ.
ಹುಕ್ಕೇರಿ ಬಳಿ ಇರುವ ಹೊಸೂರ ಗ್ರಾಮದ ಹತ್ತಿರ ಈ ಅಪಘಾತ ಸಂಭವಿಸಿದೆ. ದಾರಿಗೆ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಗೂಡ್ಸ್ ವಾಹನ ಪಲ್ಟಿಯಾಗಿದೆ.
ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ಧಾಖಲು ಮಾಡಲಾಗಿದೆ.