ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಆರ್ಡಿನೆನ್ಸ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾ. ಮತ್ತು ಮತ್ತು ಏಳು ಜನ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ.
ಸ್ಫೋಟದಿಂದಾಗಿ ಮೇಲ್ಛಾವಣಿ ಕುಸಿದಿದ್ದು, ಕನಿಷ್ಠ 12 ಜನರು ಸಿಲುಕಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಇದುವರೆಗೆ ಐವರನ್ನು ರಕ್ಷಿಸಲಾಗಿದ್ದು, ಅವಶೇಷಗಳನ್ನು ತೆಗೆಯಲು ಅಗೆಯುವ ಯಂತ್ರವನ್ನು ಬಳಸಲಾಗುತ್ತಿದೆ.
ಸ್ಫೋಟದ ತೀವ್ರತೆ, ಸ್ಫೋಟವು ಎಷ್ಟು ಶಕ್ತಿಯುತವಾಗಿತ್ತು ಎಂದರೆ ಅದು 5 ಕಿಲೋಮೀಟರ್ ದೂರದವರೆಗೆ ಕೇಳಿಸಿದೆ
ಭೀಕರ ಸ್ಫೋಟ ನಡೆದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮಹಾರಾಷ್ಟ್ರ ಸರ್ಕಾರ, ಮೃತರ ಕುಟುಂಬದವರ ಜೊತೆ ನಿಲ್ಲುವದಾಗಿ ಹೇಳಿದೆ.