ಮಾಧ್ಯಮ ಕ್ಷೇತ್ರದಲ್ಲಿ 30 ವರ್ಷಗಳಿಂದ ಸೇವೆ ಸಲ್ಲಿಸಿರುವ ಕೆ ಬದ್ರುದ್ದಿನ, ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಗೆಹಲೊಟ್, ಬದ್ರುದ್ದಿನ ಅವರಿಗೆ ಪ್ರಮಾಣ ವಚನ ಭೋಧಿಸಿದರು. ಬದ್ರುದ್ದಿನ ಅವರು ನಾಡಿನ ಹಿರಿಯ ವರದಿಗಾರರಾಗಿ ವಿವಿಧ ಸುದ್ದಿ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಸರ್ಕಾರ ಇವರ ಸೇವೆಯನ್ನು ಗುರುತಿಸಿ, ಅವರನ್ನು ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತರನ್ನಾಗಿ ನೇಮಕ ಮಾಡಿದೆ.
