ಋುಣಮುಕ್ತ ಪ್ರಮಾಣಪತ್ರ (ಇಸಿ) ಪಡೆಯಲು ಹಾಗೂ ಆಸ್ತಿ ನೋಂದಣಿ ಪ್ರಕ್ರಿಯೆ ಸರ್ವರ್ ಸಮಸ್ಯೆಯಿಂದ ಸ್ಥಗಿತಗೊಂಡಿದೆ.
ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳಿಗೆ ಸ್ಪಂಧಿಸಬೇಕಾದ ಅಧಿಕಾರಿಗಳು ಎರಡು ದಿನವಾದರು ತಾಂತ್ರಿಕ ದೋಷ ಎಂದು ಹೇಳುತ್ತಿದ್ದಾರೆ.
ಇ ಆಡಳಿತ ವಿಭಾಗವು ಸಮಸ್ಯೆಗಳನ್ನು ಪರಿಹರಿಸಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡರು ಹೇಳಿದ್ದಾರೆ.
ರಾಜ್ಯದ 256 ನೋಂದಣಿ ಕಚೇರಿಗಳಲ್ಲಿ ಕಾವೇರಿ 2.0 ತತ್ರಾಂಶದಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಾರ್ವಜನಿಕರು ಪರದಾಡುವಂತಾಗಿದೆ.
