Download Our App

Follow us

Home » ಕರ್ನಾಟಕ » ಇಂದು ಧಾರವಾಡ ಹೈಕೋರ್ಟನತ್ತ ಎಲ್ಲರ ಚಿತ್ತ

ಇಂದು ಧಾರವಾಡ ಹೈಕೋರ್ಟನತ್ತ ಎಲ್ಲರ ಚಿತ್ತ

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಎರಡು ಪ್ರಕರಣಗಳಿಗೆ ಸಂಬಂದಿಸಿದಂತೆ ಇಂದು ಧಾರವಾಡ ಹೈಕೋರ್ಟ್ ನಿಂದ ಮಹತ್ವದ ತೀರ್ಪು ಹೊರಬೀಳಲಿದೆ. 

ಪೋಕ್ಸೊ ಪ್ರಕರಣ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆ ರದ್ದತಿ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರು, ಹಾಗೂ ವೈ ಎಂ ಅರುಣ, ರುದ್ರೇಶ ಮರಳಸಿದ್ದಯ್ಯ, ಜಿ ಮರಿಸ್ವಾಮಿ ಅವರು ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಇಂದು ಪ್ರಕಟಿಸಲಿದೆ.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಜನವರಿ 17ರಂದು ಕಾಯ್ದಿರಿಸಿರುವ ಆದೇಶವನ್ನು ಇಂದು ಪ್ರಕಟಿಸಲಿದೆ. 

ಮತ್ತೊಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಬಂಧಿಸಿದ ಮುಡಾ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ವಹಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಆದೇಶ ಸಹ ಇಂದು ಪ್ರಕಟವಾಗಲಿದೆ. 

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು, ಜನೇವರಿ 27ರಂದು ಕಾಯ್ದಿರಿಸಿರುವ ಆದೇಶವನ್ನು ಇಂದು ಪ್ರಕಟಿಸಲಿದೆ.

ಇಂದು ಎಲ್ಲರ ಚಿತ್ತ ಧಾರವಾಡ ಹೈಕೋರ್ಟ್ ನತ್ತ ನೆಟ್ಟಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳಿಗೆ ಬಿಗ್ ರಿಲೀಫ್

ರಾಜ್ಯ ರಾಜಕಾರಣದಲ್ಲಿ ದೊಡ್ಡ ಸುದ್ದಿ ಮಾಡಿದ್ದ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯನವರ ಪ್ರಕರಣಗಳಿಗೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಆದೇಶ ಪ್ರಕಟಿಸಿದೆ.  ಪೋಕ್ಸೋ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ

Live Cricket

error: Content is protected !!