ಬಹುತೇಕ ಭಾರತ ಕೇಸರಿಮಯವಾಗತೊಡಗಿದೆ. ದೆಹಲಿ ಗದ್ದುಗೆ ಗೆದ್ದು ಬೀಗುತ್ತಿರುವ ಬಿಜೆಪಿ ನೇತ್ರತ್ವದ ಎನ್ ಡಿ ಎ ದೇಶದ 2 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 21 ರಾಜ್ಯಗಳಲ್ಲಿ ಅಧಿಕಾರಕ್ಕೆ ಏರಿದೆ.
ಕಾಂಗ್ರೇಸ್ ನೇತೃತ್ವದ ಇಂಡಿಯಾ ಒಕ್ಕೂಟ 8 ರಾಜ್ಯಗಳು ಸೇರಿದಂತೆ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಏರಿದೆ.
ಇಂಡಿಯಾ ಒಕ್ಕೂಟದ 9 ರಾಜ್ಯಗಳ ಪೈಕಿ ಕಾಂಗ್ರೇಸ್ ತನ್ನ ಸ್ವಂತ ಶಕ್ತಿಯ ಮೇಲೆ ಕೇವಲ 3 ರಾಜ್ಯಗಳಲ್ಲಿ ಅಧಿಕಾರ ಹಿಡಿದಿದೆ. ತೆಲಂಗಾಣ, ಹಿಮಾಚಲ ಪ್ರದೇಶ ಹಾಗೂ ಕರ್ನಾಟಕದಲ್ಲಿ ಕಾಂಗ್ರೇಸ್ ಸರ್ಕಾರ ಆಡಳಿತ ನಡೆಸುತ್ತಿದೆ.
