ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜೀ ಕನ್ನಡ ವಾಹಿನಿಯ ಮೂರನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ವಾರ್ಷಿಕೋತ್ಸವಕ್ಕೆ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಜೀ ಕನ್ನಡ ವಾಹಿನಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 46 ಜನರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸಚಿವ ರಾಮಲಿಂಗಾರೆಡ್ಡಿ , ನಟ ದ್ರುವ ಸರ್ಜಾ, ಜೀ ಕನ್ನಡದ ಮುಖ್ಯಸ್ಥ ರವಿ, ನಿರೂಪಕಿ ದಿವ್ಯಶ್ರೀ ಸೇರಿದಂತೆ ಅನೇಕರು.
