ರಾಜ್ಯದ ಎರಡನೇ ಅತೀ ದೊಡ್ಡ ಮಹಾನಗರ ಪಾಲಿಕೆಯಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿನ ಗುತ್ತಿಗೆದಾರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಮಗಾರಿಕೆ ಮುಗಿದು ಎರಡು ಮೂರು ವರ್ಷಗಳಾದರು ಬಿಲ್ ಪಾವತಿ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಗುತ್ತಿಗೆದಾರರು, ಬಿಲ್ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ. ಬಾಕಿ ಇರುವ ಬಿಲ್ ಪಾವತಿ ಮಾಡಿ, ಹೊಸ ಕಾಮಗಾರಿಯ ಟೆಂಡರ್ ನಡೆಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ತಕ್ಷಣಕ್ಕೆ ಪಾಲಿಕೆ ಉಳಿಸಿಕೊಂಡಿರುವ ಬಿಲ್ ಹಣ ಕೊಡುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಗುತ್ತಿಗೆದಾರರ ಸಂಘ ಮನವಿ ಮಾಡಿದೆ.
