ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಧಾಖಲೆ ಮಾಡಲು ಸಜ್ಜಾಗಿದ್ದಾರೆ.
ಮಾರ್ಚ್ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು 16 ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಧಾಖಲೆ ಬರೆಯಲಿದ್ದಾರೆ.
ಪಂಚ ಗ್ಯಾರೆಂಟಿ, ಬೆಲೆ ಏರಿಕೆ ನಡುವೆ, ಸಿದ್ದರಾಮಯ್ಯನವರು ಮಂಡಿಸಲಿರುವ 16 ನೇ ಬಜೆಟ್ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯವನ್ನು ಅಭಿವೃದ್ಧಿಯತ್ತ ಒಯ್ಯುವ ದೊಡ್ಡ ಜವಾಬ್ದಾರಿ ಸಿದ್ದರಾಮಯ್ಯನವರ ಮೇಲಿದೆ.
ಮಾರ್ಚ್ 3 ರಂದು ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದು, ನಂತರ ಮೂರು ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.
ಮಾರ್ಚ್ 7 ರಂದು ಸಿದ್ದರಾಮಯ್ಯನವರು ಬಜೆಟ್ ಮಂಡಿಸಲಿದ್ದಾರೆ. ಜನಸಾಮಾನ್ಯರು ಮತ್ತು ಕೃಷಿಗೆ ಪೂರಕವಾಗಿ ಬಜೆಟ್ ಇರಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
