ದೇವಾಲಯಗಳ ಆದಾಯ ಹೆಚ್ಚಳಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ದೇಗುಲಗಳ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ಇನ್ನು ಮುಂದೆ ಸರ್ಕಾರವೇ ವೇತನ ನೀಡಲಿದೆ.
ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನದ ನೌಕರರಿಗೆ ಸಂಚಿತ ನಿಧಿಯಿಂದ ವೇತನ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಇದರಿಂದಾಗಿ ದೇವಸ್ಥಾನಗಳಿಗೆ ವಾರ್ಷಿಕ ಸುಮಾರು ₹12.16 ಕೋಟಿ ಉಳಿತಾಯವಾಗಲಿದೆ ಎನ್ನಲಾಗಿದೆ.
