ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ್ದರ ಪರಿಣಾಮ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗದ ಬಳಿ ನಡೆದಿದೆ.
ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ.
ಅಪಘಾತಕ್ಕೆ ಒಳಗಾದ ಲಾರಿ, ಕಲ್ಲಂಗಡಿ ಸಾಗಿಸುತ್ತಿತ್ತು ಎನ್ನಲಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಸೇರಿದಂತೆ ಇಬ್ಬರು ಕಲ್ಲಂಗಡಿ ವ್ಯಾಪಾರಿಗಳು ಸಾವನ್ನಪ್ಪಿದ್ದಾರೆ.
