ಭಾಗ್ಯಗಳ ಸರದಾರ, ಅಹಿಂದ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿಮಾನಿಗಳು ಬೆಳಗಾವಿಯಲ್ಲಿ ಸಿದ್ದರಾಮಯ್ಯನವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪನೆ ಮಾಡಲು ನಿರ್ಧರಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮಳ ವೀರ ನೆಲದಲ್ಲಿ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧಾರ ಮಾಡಲಾಗಿದೆ.
ಸಿದ್ದರಾಮಯ್ಯನವರ ಅಭಿಮಾನಿ, ಸರ್ವೋದಯ ಮುಖಂಡ ಪಂಚಾಕ್ಷರಯ್ಯ ಗುಣಾಚಾರಿ ಕಂಚಿನ ಪ್ರತಿಮೆ ಸ್ಥಾಪನೆಯ ಜವಾಬ್ದಾರಿ ವಹಿಸಿದ್ದಾರೆ.
ಸಿದ್ದರಾಮಯ್ಯನವರು 16 ನೇ ಸಲ ಬಜೆಟ್ ಮಂಡಿಸಿ, ಧಾಖಲೆ ಮಾಡಿದ್ದು, ಭಾಗ್ಯಗಳ ಸರದಾರ ಎಂದೇ ಹೆಸರುವಾಸಿಯಾಗಿದ್ದಾರೆ.
ಎಲ್ಲವು ಅಂದುಕೊಂಡಂತೆ ನಡೆದರೆ, 2025 ರಲ್ಲಿ ಬೆಳಗಾವಿಯ ಕಾಂಗ್ರೇಸ್ ಅಧಿವೇಶನ ನಡೆದ ಸ್ಥಳದಲ್ಲಿ 50 ಅಡಿ ಎತ್ತರದ ಸಿದ್ದರಾಮಯ್ಯನವರ ಕಂಚಿನ ಪ್ರತಿಮೆ ಸ್ಥಾಪನೆಯಾಗಲಿದೆ.
