ರಾಜ್ಯದಲ್ಲಿ ಮಾರ್ಚ್ ತಿಂಗಳ ಕೊನೆಯಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ದಕ್ಷಿಣ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದ್ದು, ಬೇಸಿಗೆ ಧಗೆಯಿಂದ ಸುಡುತ್ತಿರುವ ಬೆಂಗಳೂರಿನ ತಾಪಮಾನ ತುಸು ಕಡಿಮೆಯಾಗಲಿದೆ.
ಉತ್ತರ ಒಳನಾಡಿನಲ್ಲಿ ಎಂದಿನಂತೆ ಬೇಸಿಗೆಯ ಕಾಟ ಇರಲಿದ್ದು, ಈಶಾನ್ಯ ಭಾಗದಲ್ಲಿ ರಣಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ ತಿಂಗಳಲ್ಲಿ ಮುಂಗಾರು ಪ್ರವೇಶ ಮಾಡಲಿದ್ದು ಈ ಸಲದ ಮುಂಗಾರು ಮಳೆ ಚೆನ್ನಾಗಿ ಸುರಿಯಲಿದೆ ಎಂದು ತಜ್ಞರು ತಿಳಿಸಿದ್ದಾರೆ.
ಕರಾವಳಿ ಕರ್ನಾಟಕ ಮತ್ತು ಮಲೆನಾಡಿನ ಭಾಗದಲ್ಲಿ ಶೇಕಡಾ 50 ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
