ಧಾರವಾಡದ ಸಮೀಪ ಮಹಿಂದ್ರಾ ಥಾರ್ ವಾಹನ ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಘಟನೆ ನಡೆದಿದೆ.
ಸವದತ್ತಿಯಿಂದ ಧಾರವಾಡದ ಕಡೆಗೆ ಈ ವಾಹನ ಬರುತ್ತಿತ್ತು ಎನ್ನಲಾಗಿದೆ. ಕಾಶಿ ನಗರದತ್ತ ಬರುತ್ತಿದ್ದಂತೆ ಇದ್ದಕ್ಕಿದ್ದಂತೆ ಥಾರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ವಾಹನ ನಿಲ್ಲಿಸಿದ ಚಾಲಕ ಪ್ರಾಣ ಉಳಿಸಿಕೊಂಡಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ವಾಹನ ಕರುಕಲಾಗಿದೆ.
