ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್‌ಗೆ ಬೆಂಗಳೂರಿನ ಸತ್ರ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಮಂಗಳವಾರ ಕಾಯ್ದಿರಿಸಿದ್ದ ಜಾಮೀನು ಆದೇಶವನ್ನು ಇಂದು ಪ್ರಕಟಿಸಿದ 64ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಈರಪ್ಪಣ್ಣ ಪವಡಿ ನಾಯ್ಕ್ ಅವರು ಈ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಆರ್ಥಿಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ರನ್ಯಾಗೆ ಜಾಮೀನು ನಿರಾಕರಿಸಿತ್ತು.
